ಗುಂಡ್ಲುಪೇಟೆಯಲ್ಲಿ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ
ಚಾಮರಾಜನಗರ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ವಿರುದ್ಧ ವಿಶೇಷ ದಾಳಿ ಹಾಗೂ ತಪಾಸಣೆ ನಡೆಸಲಾಯಿತು. ಈ ವೇಳೆ ಸ್ಕೂಟರ್ ಗ್ಯಾರೇಜ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಿಶೋರ ಕ
Rescue


ಚಾಮರಾಜನಗರ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ವಿರುದ್ಧ ವಿಶೇಷ ದಾಳಿ ಹಾಗೂ ತಪಾಸಣೆ ನಡೆಸಲಾಯಿತು.

ಈ ವೇಳೆ ಸ್ಕೂಟರ್ ಗ್ಯಾರೇಜ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಿಶೋರ ಕಾರ್ಮಿಕರನ್ನು ಅಧಿಕಾರಿಗಳು ಪತ್ತೆ ಹಚ್ಚಿದರು. ಬಾಲಕಾರ್ಮಿಕರನ್ನು ಕೆಲಸಕ್ಕೆ ತೊಡಗಿಸಿಕೊಂಡಿರುವುದು ಕಾನೂನುಬಾಹಿರವಾಗಿರುವುದರಿಂದ ತಕ್ಷಣವೇ ಅವರನ್ನು ಕೆಲಸದಿಂದ ಬಿಡುಗಡೆ ಮಾಡಲಾಯಿತು.

ಅಧಿಕಾರಿಗಳು ಪೋಷಕರಿಗೆ ಮಕ್ಕಳನ್ನು ಮತ್ತೆ ಶಾಲೆಗೆ ಕಳುಹಿಸುವ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟು, ಅವರ ಶಿಕ್ಷಣ ಮುಂದುವರಿಸಲು ಸಲಹೆ ನೀಡಿದರು. ಬಳಿಕ ಇಬ್ಬರು ಕಿಶೋರರನ್ನು ಪೋಷಕರ ವಶಕ್ಕೆ ಒಪ್ಪಿಸಲಾಯಿತು.

ಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande