
ಚಿತ್ರದುರ್ಗ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ.
ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.
ರಾಜ್ಯ ಕೃಷಿ ಆಧಾರಿತ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರಾಯೋಗಿಕ ಪರೀಕ್ಷೆಗೆ ಈ ತರಬೇತಿಯಿಂದ ಪ್ರಯೋಜನವಾಗಲಿದೆ.
ತರಬೇತಿ ಪಡೆಯಲು ಆಸಕ್ತಿಯುಳ್ಳವರು ಏಪ್ರಿಲ್ 24ರೊಳಗಾಗಿ ಎಪಿಎಂಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಐಎಟಿ ಅಧ್ಯಕ್ಷ ಬಿ.ಮಂಜುನಾಥ್ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ದೂರವಾಣಿ ಸಂಖ್ಯೆ 9742455666, ಖಜಾಂಚಿ ದೂರವಾಣಿ ಸಂಖ್ಯೆ 8217403715 ಗೆ ಸಂಪರ್ಕಿಸಬಹುದು ಎಂದು ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa