ನಾಳೆ ಬಸವೇಶ್ವರ ಜಯಂತಿ ಕಾರ್ಯಕ್ರಮ
ಧಾರವಾಡ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಕರ್ನಾಟಕದ ಸಾಂಸ್ಕ್ರತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಏಪ್ರೀಲ್ 20, 2026 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ
ನಾಳೆ ಬಸವೇಶ್ವರ ಜಯಂತಿ ಕಾರ್ಯಕ್ರಮ


ಧಾರವಾಡ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಕರ್ನಾಟಕದ ಸಾಂಸ್ಕ್ರತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಏಪ್ರೀಲ್ 20, 2026 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ವಿಶೇಷ ಆಹ್ವಾನಿತರಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ಮನೋಹರ ವಿ., ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ ಅವರು ಉಪಸ್ಥಿತರಿರುವರು.

ಕಾನೂನು ತಜ್ಞರು ಹಾಗೂ ಚಿಂತಕ ಡಾ.ಲೋಹಿತ ಡಿ ನಾಯ್ಕರ ಅವರು ಶ್ರೀ ಬಸವೇಶ್ವರರು ಮತ್ತು ಮಾನವ ಹಕ್ಕುಗಳ ವಿಷಯದ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande