ಏ.21 ರಂದು ಸರ್ವೋತ್ತಮ ಸೇವಾ ಪ್ರಶಸ್ತಿ
ಹಾಸನ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ/ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆ ರೂಪಿಸಿದ್ದು ಹಾಸನ ಜಿಲ್ಲಾ ಮಟ್ಟದಲ್ಲಿ 2024 ಮತ್ತು 2025 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅಧಿಕಾರಿ/ನೌಕರರನ್ನು ಆಯ್ಕೆ
ಏ.21 ರಂದು ಸರ್ವೋತ್ತಮ ಸೇವಾ ಪ್ರಶಸ್ತಿ


ಹಾಸನ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ/ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆ ರೂಪಿಸಿದ್ದು ಹಾಸನ ಜಿಲ್ಲಾ ಮಟ್ಟದಲ್ಲಿ 2024 ಮತ್ತು 2025 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅಧಿಕಾರಿ/ನೌಕರರನ್ನು ಆಯ್ಕೆ ಮಾಡಲಾಗಿದೆ.

2024ನೇ ಸಾಲಿನ ಅಧಿಕಾರಿ/ನೌಕರರ ವಿವರ: ಹಾಸನ ಕೃಷಿ ಇಲಾಖೆ ಉಪನಿರ್ದೇಶಕರು ಕೋಕಿಲ, ಹಾಸನ ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕರು ಡಾ. ಮಧು ಬಿ ವಿ, ಅರಸೀಕೆರೆ ಕಣಕಟ್ಟೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆಡಳಿತ ವೈದ್ಯಾಧಿಕಾರಿಗಳು ಡಾ|| ರಂಗನಾಥ, ಅರಸೀಕೆರೆ ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಪರಿಸರ) ರವಿ ಕುಮಾರ್, ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ರಮೇಶ್ ಎಲ್.ಎಸ್, ಹಾಸನ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ವಿಷಯ ಪರಿವೀಕ್ಷಕರಾದ ಶೇಖರೇಗೌಡ, ಮಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್, ಹಾಸನ ಜಿಲ್ಲಾಧಿಕಾರಿಗಳ ಕಚೇರಿ ದ್ವಿ.ದ.ಸ. ಜಯಂತಿ ಎಸ್.ಜೆ, ಹಾಸನ ಪ್ರಾದೇಶಿಕ ಸಾರಿಗೆ ಕಚೇರಿ, ಹಿರಿಯ ವಾಹನ ಚಾಲಕರು ರಾಜಬೋವಿ, ಹಾಸನ ಜಿಲ್ಲಾ ಪಂಚಾಯಿತಿ ಗ್ರೂಪ್-ಡಿ ನೌಕರರು ಮಂಜೇಗೌಡ.

2025ನೇ ಸಾಲಿನ ಅಧಿಕಾರಿ/ನೌಕರರ ವಿವರ: ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಡಾ|| ಚೇತನ್, ಹೊಳೆನರಸೀಪುರ ಪುರಸಭೆ ಪರಿಸರ ಅಭಿಯಂತರರು ರುಚಿದರ್ಶಿನಿ, ಸಕಲೇಶಪುರ ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಮಲ್ಲಮ್ಮ, ಹಾಸನ ಲೋಕೋಪಯೋಗಿ ಇಲಾಖೆ ವಿಶೇಷ ವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೇಮಂತ್ ಕೆ.ಆರ್, ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಯಪ್ರಕಾಶ್ ಬಿ.ಎನ್, ಹಾಸನ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಸಹ ಪ್ರಾಧ್ಯಾಪಕರು ಡಾ. ಪಲ್ಲವಿ ಹೆಚ್ ವಿ, ಹಾಸನ ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಹೆಚ್.ಆರ್ ಯಶೋಧರ, ಚನ್ನರಾಯಪಟ್ಟಣ ತಾಲ್ಲೂಕು ಕಚೇರಿ ಶಿರಸ್ತೇದಾರ್ ಗಿರೀಶ್ಬಾಬು, ಹಾಸನ ಲೋಕೋಪಯೋಗಿ ಇಲಾಖೆ ವಾಹನ ಚಾಲಕರಾದ ವೆಂಕಟೇಗೌಡ

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ/ನೌಕರರಿಗೆ ಏ.21ರಂದು ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಚಾರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande