
ಬೆಂಗಳೂರು, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇಗುಲದ ಸಮೀಪ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಆರು ಮಂದಿ ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ.
ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.
“ಕುಟುಂಬದ ಆಧಾರಸ್ತಂಭಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ” ಎಂದು ಅವರು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa