
ಮೈಸೂರು, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಮುಖ್ಯಮಂತ್ರಿಗಳ ಭೇಟಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು, ವಾಹನ ಸಂಚಾರ ನಿಯಂತ್ರಣ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾರ್ಯಕ್ರಮ ಸ್ಥಳದ ಭದ್ರತೆ ಬಗ್ಗೆ ವಿಶೇಷ ಗಮನ ಹರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಬಂದೋಬಸ್ತ್ ಕರ್ತವ್ಯದಲ್ಲಿರುವ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧೀಕ್ಷಕರು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa