ಬೇಸಿಗೆಯ ನೀರಿನ ಅಭಾವ ನೀಗಿಸಲು ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿ ರಚನೆ
ಬೇಸಿಗೆಯ ನೀರಿನ ಅಭಾವ ನೀಗಿಸಲು ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿ ರಚನೆ
ಬೇಸಿಗೆಯ ನೀರಿನ ಅಭಾವ ನೀಗಿಸಲು ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿ ರಚನೆ


ಕೋಲಾರ, ೧೯ ಏಪ್ರಿಲ್ (ಹಿ.ಸ) :

ಆ್ಯಂಕರ್ : ಕೋಲಾರ ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯನ್ನು ಮನಗಂಡು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ0ತೆ ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿರ್ಧರಿಸಿದೆ. ಏಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 'ಕುಡಿಯುವ ನೀರಿನ ನಿರ್ವಹಣಾ ಸಮಿತಿ'ಯನ್ನು ರಚಿಸಿ, ಅಧಿಕಾರಿಗಳಿಗೆ ಮಹತ್ವದ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಈ ಸಮಿತಿಯಲ್ಲಿ ಕೆಳಕಂಡ ಅಧಿಕಾರಿಗಳು/ಸಿಬ್ಬಂದಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ: ಅಧ್ಯಕ್ಷರು:ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಸದಸ್ಯ ಕಾರ್ಯದರ್ಶಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರು: ಪಶುವೈಧ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಕಿರಿಯ ಅಭಿಯಂತರರು, ಗ್ರಾಮ ಆಡಳಿತಾಧಿಕಾರಿಗಳು, ಬೆಸ್ಕಾಂ ಕಿರಿಯ ಅಭಿಯಂತರರು ಮತ್ತು ನೋಂದಾಯಿತ ಸ್ವಯಂಸೇವಕರು.

ಪAಚಾಯಿತಿ ಅಭಿವೃದ್ಧಿ ಅಧಿಕಾರಿಗಳು : (ತೀವ್ರ ನೀರಿನ ಅಭಾವವಿರುವ ಪ್ರದೇಶಗಳನ್ನು ಸಮೀಕ್ಷೆ ನಡೆಸಿ ಗುರುತಿಸುವುದು, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ ಮಾಡುವುದು, ಕುಡಿಯುವ ನೀರಿನ ಸಹಾಯವಾಣಿ ಸ್ಥಾಪನೆ ಮತ್ತು ಪ್ರತಿದಿನ ನೀರಿನ ಪೂರೈಕೆಯ ವರದಿಯನ್ನು ತಾಲ್ಲೂಕು ಕಚೇರಿಗೆ ಸಲ್ಲಿಸುವುದು ಇವರ ಜವಾಬ್ದಾರಿಯಾಗಿದೆ.

ಗ್ರಾಮ ಆಡಳಿತಾಧಿಕಾರಿಗಳು:ನೀರಿನ ಮೂಲಸೌಕರ್ಯಗಳ ನವೀಕೃತ ಪಟ್ಟಿ ನಿರ್ವಹಣೆ, ನೀರಿನ ದುರ್ಬಳಕೆಯನ್ನು ತಡೆಯುವುದು (ಕೃಷಿ/ವಾಹನ ತೊಳೆಯಲು ಬಳಕೆ ನಿಷೇಧ) ಮತ್ತು ವಿವಾದಗಳನ್ನು ಬಗೆಹರಿಸುವುದು.

ಕಿರಿಯ ಅಭಿಯಂತರರು: ದೂರು ಬಂದ ೨೪ ಗಂಟೆಯೊಳಗೆ ದುರಸ್ತಿ ಕಾರ್ಯ ಕೈಗೊಳ್ಳುವುದು, ಬೋರ್ವೆಲ್ಗಳ ಪುನಶ್ಚೇತನ, ಮತ್ತು ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವುದು.

ಪಶುವೈಧ್ಯಾಧಿಕಾರಿಗಳು: ಜಾನುವಾರುಗಳ ನೀರಿನ ತೊಟ್ಟಿಗಳ ನಿರ್ವಹಣೆ, ಮೇವಿನ ಬ್ಯಾಂಕ್ಗಳ ಸ್ಥಾಪನೆ ಮತ್ತು ಪೌಷ್ಟಿಕಾಂಶದ ಸಲಹೆಗಳನ್ನು ನೀಡುವುದು.

ಬೆಸ್ಕಾಂ ಕಿರಿಯ ಅಭಿಯಂತರರು: ಕುಡಿಯುವ ನೀರಿನ ಪಂಪ್ಸೆಟ್ಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸರಬರಾಜು ಮಾಡುವುದು, ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ಹೊಸ ಬೋರ್ವೆಲ್ಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸುವುದು.

ಸ್ವಯಂಸೇವಕರು: ನೀರಿನ ಮಿತಬಳಕೆ ಹಾಗೂ ಮಳೆನೀರು ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀರು ಸರಬರಾಜಿಗೆ ಸಹಕರಿಸುವುದು.

ಶಾಲಾ-ಕಾಲೇಜುಗಳು, ಅಂಗನವಾಡಿಗಳು ಮತ್ತು ಆಸ್ಪತ್ರೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande