ಅಂಬೇಡ್ಕರ್ ಜಯಂತಿ ಅಂಗವಾಗಿ 5 ಸಾವಿರ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಬೆಂಗಳೂರು, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಬೆಂಗಳೂರಿನ ಓಕಳಿಪುರಂನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಸಾವಿರ ಪೌರಕಾರ್ಮಿಕರಿಗೆ ಆಹಾರ ಕಿಟ್ಗಳನ್ನು ವಿತರಿಸಿದರು. ಬೆಂಗಳೂರು ಕೇಂದ್ರ ಜಿಲ್ಲಾ ಕಾ
Distribution


ಬೆಂಗಳೂರು, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಬೆಂಗಳೂರಿನ ಓಕಳಿಪುರಂನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಸಾವಿರ ಪೌರಕಾರ್ಮಿಕರಿಗೆ ಆಹಾರ ಕಿಟ್ಗಳನ್ನು ವಿತರಿಸಿದರು.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಳಿಪುರಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಗೌರವ ನಮನ ಸಲ್ಲಿಸಬೇಕಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಾನತೆ, ಸಹೋದರತ್ವ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಅಳವಡಿಸದೇ ಹೋಗಿದ್ದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ವರ್ಣಾಶ್ರಮ ಪದ್ಧತಿಯ ವಿರುದ್ಧ ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಾನಂತರ ಹೋರಾಟ ನಡೆಸಿದ ಅಂಬೇಡ್ಕರ್, ಎಲ್ಲರಿಗೂ ಸಮಾನ ಹಕ್ಕುಗಳನ್ನು ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆಯನ್ನು ರೂಪಿಸಿದರು ಎಂದು ಅವರು ಹೇಳಿದರು. ಪ್ರತಿಯೊಬ್ಬ ಪ್ರಜೆಗೆ ಮೂಲಭೂತ ಹಕ್ಕುಗಳು, ಮಹಿಳೆಯರಿಗೆ ಸಮಾನ ಅವಕಾಶ, ಕಡ್ಡಾಯ ಶಿಕ್ಷಣದ ಹಕ್ಕುಗಳನ್ನು ನೀಡಿದ ಪರಿಣಾಮವೇ ಭಾರತ ಇಂದು ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande