ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : 2026-27 ನೇ ಸಾಲಿನ ಪುರಸಭೆ ಹಾಗೂ ಎಸ್ಎಫ್ಸಿ ಶೇ. 24.10 ಯೋಜನೆಯಡಿ ನವಲಗುಂದ ಪುರಸಭೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅಡಿಗೆ ಅನಿಲ ಸಂಪರ್ಕ ಕಲ್ಪಿಸುವುದು ಹಾಗೂ ಶೇ. 7.25 ಯೋಜನೆಯಡಿ ಇತರೆ ಬಡಜನರಿಗೆ ಅ
ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಧಾರವಾಡ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2026-27 ನೇ ಸಾಲಿನ ಪುರಸಭೆ ಹಾಗೂ ಎಸ್ಎಫ್ಸಿ ಶೇ. 24.10 ಯೋಜನೆಯಡಿ ನವಲಗುಂದ ಪುರಸಭೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅಡಿಗೆ ಅನಿಲ ಸಂಪರ್ಕ ಕಲ್ಪಿಸುವುದು ಹಾಗೂ ಶೇ. 7.25 ಯೋಜನೆಯಡಿ ಇತರೆ ಬಡಜನರಿಗೆ ಅಡುಗೆ ಅನಿಲ ಸಂಪರ್ಕ ಹಾಗೂ ಶೇ.5 ಯೋಜನೆಯಡಿ ವಿಕಲಚೇತನರಿಗೆ ಅಡುಗೆ ಸಂಪರ್ಕ ಸೌಲಭ್ಯ ಹಾಗೂ ವೈಧ್ಯಕೀಯ ವೆಚ್ಚಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಾಗೂ ಇತರೆ ಬಡಜನರು ಹಾಗೂ ಅಂಗವಿಕಲರು ಮೇ 15, 2026 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಬಂಧಿಸಿದ ದಾಖಲಾತಿ ಇಲ್ಲದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಈಗಾಗಲೇ ಸೌಲಭ್ಯ ಪಡೆದ ಕುಟುಂಬದ ಸದಸ್ಯರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಪುರಸಭೆಯ ಸಾಮಾನ್ಯ ಸಭೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ ಸೌಲಭ್ಯವನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ನವಲಗುಂದ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande