ಪವನ್ ಕಲ್ಯಾಣ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ನವದೆಹಲಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ, “ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್
Pm


ನವದೆಹಲಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ, “ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಅವರು ಅತ್ಯಂತ ಧೈರ್ಯಶಾಲಿ ವ್ಯಕ್ತಿ. ಅವರು ಬಹು ಬೇಗ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಆಂಧ್ರ ಪ್ರದೇಶದ ನಟ ಹಾಗೂ ಉಪ ಮುಖ್ಯಮಂತ್ರಿ ಆಗಿರುವ ಪವನ್ ಕಲ್ಯಾಣ್ ಅವರ ಆರೋಗ್ಯ ಕಳೆದ ಕೆಲವು ತಿಂಗಳುಗಳಿಂದ ಹದಗೆಟ್ಟಿತ್ತು ಎಂದು ವರದಿಯಾಗಿದೆ. ಶುಕ್ರವಾರ ನಡೆದ ಸಭೆಯ ವೇಳೆ ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

ಜನಸೇನಾ ಪಕ್ಷ ನೀಡಿದ ಮಾಹಿತಿಯ ಪ್ರಕಾರ, ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್ಐ ಸ್ಕ್ಯಾನ್ ನಂತರ ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಸಲಹೆ ನೀಡಿದರು. ಅದರಂತೆ ಶನಿವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಪವನ್ ಕಲ್ಯಾಣ್ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ವೈದ್ಯರು ಅವರಿಗೆ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande