
ಚಿತ್ರದುರ್ಗ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2026ರ ಮೇ 01ರಂದು ಬುದ್ಧ ಪೌರ್ಣಿಮೆಯಂದು ಭಗವಾನ್ ಬುದ್ಧರ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಇದೇ ಏಪ್ರಿಲ್ 21ರಂದು ಮಧ್ಯಾಹ್ನ 12.30ಕ್ಕೆ ನಗರದ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು. ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಬೌದ್ದ ಉಪಾಸಕರು ಸಭೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆ ಸೂಚನೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa