ಏ.21 ರಂದು ಶ್ರೀ ಶಂಕರಾಚಾರ್ಯರ ಜಯಂತಿ
ಬಳ್ಳಾರಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ.21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂಗನಕಲ್ಲು ರಸ್ತೆಯ ಭಾರತಿ ತೀರ್ಥ ಸಭಾಭವನದಲ್ಲಿ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾ
ಏ.21 ರಂದು ಶ್ರೀ ಶಂಕರಾಚಾರ್ಯರ ಜಯಂತಿ


ಬಳ್ಳಾರಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ.21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂಗನಕಲ್ಲು ರಸ್ತೆಯ ಭಾರತಿ ತೀರ್ಥ ಸಭಾಭವನದಲ್ಲಿ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ

.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾಪೆರ್Çೀರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿಯ ಸಭಾಪತಿ ಬೀದಿಯ ಶ್ರೀ ಶೃಂಗೇರಿ ಶಂಕರಮಠದ ಮಠಾಧಿಕಾರಿ ಕೆ.ರವಿಶಾಸ್ತ್ರಿ ಸೇರಿದಂತೆ ಇತರರು ಭಾಗವಹಿಸುವರು.

ಸಂಗನಕಲ್ಲಿನ ನಿವೃತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪಪನ್ಯಾಸ ನೀಡುವರು. ಬಳ್ಳಾರಿಯ ಕೆ.ಶಾಂತಶಾಸ್ತ್ರಿ ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

ಮೆರವಣಿಗೆ :

ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಇಂದಿರಾ ವೃತ್ತ, ಗಡಿಗಿ ಚೆನ್ನಪ ವೃತ್ತ, ಬೆಂಗಳೂರು ರಸ್ತೆ, ಸಭಾಪತಿ ಬೀದಿ, ಶ್ರೀ ಶೃಂಗೇರಿ ಶಂಕರಮಠದ ದವರೆಗೆ ಮೆರವಣಿಗೆ ನಡೆಯಲಿದೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande