
ಥಳ್ಳಿ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತಮಿಳುನಾಡುದ ಥಳ್ಳಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಇಂದು ಸಚಿವ ವಿ. ಸೋಮಣ್ಣ ಅವರು ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಪ್ರಚಾರ ನಡೆಸಿದರು.
ಕ್ಷೇತ್ರದ ಮಂಚಿಕೊಂಡಪಲ್ಲಿ, ಕೊತ್ತೂರು, ಮಲಹಳ್ಳಿ, ಜೀನಿನಾಥಮ್, ಕಲಿವಲ್ಊರ್ ದೊಡ್ಡಿ, ಮಲ್ಲಹಳ್ಳಿ, ದೇವನ್ ದೊಡ್ಡಿ ಹಾಗೂ ಅಂಚೆದೊಡ್ಡಿ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡ ಅವರು, ಎನ್ಡಿಎ ಅಭ್ಯರ್ಥಿ ಡಾ. ಸಿ. ನಾಗೇಶ್ ಅವರ ಪರವಾಗಿ ಮತಯಾಚನೆ ಮಾಡಿದರು.
ಈ ವೇಳೆ ಕಾರ್ಯಕರ್ತರೊಂದಿಗೆ ಗ್ರಾಮಗಳಲ್ಲಿ ಸಂಚರಿಸಿದ ಸೋಮಣ್ಣ, ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಎನ್. ಡಿ.ಎ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸ್ಥಳೀಯರು ಕೂಡ ಉತ್ಸಾಹದಿಂದ ಪ್ರಚಾರದಲ್ಲಿ ಭಾಗವಹಿಸಿದ್ದು, ಹಲವು ಕಡೆ ಕಾರ್ಯಕರ್ತರು ಅಭ್ಯರ್ಥಿ ಪರ ಘೋಷಣೆಗಳನ್ನು ಹಾಕಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa