ಯತ್ನಾಳ್ ಆರೋಪಗಳು ರಾಜಕೀಯ ನಾಟಕ : ಸಚಿವ ಎಂ.ಬಿ. ಪಾಟೀಲ
ವಿಜಯಪುರ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರ ನಗರದ ಖಾಸಗಿ ಬಸ್ಗಳ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಡುತ್ತಿರುವ ಆರೋಪಗಳ ವಿರುದ್ಧ ಸಚಿವ ಎಂ.ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಯತ್
ಸಚಿವ


ವಿಜಯಪುರ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರ ನಗರದ ಖಾಸಗಿ ಬಸ್ಗಳ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಡುತ್ತಿರುವ ಆರೋಪಗಳ ವಿರುದ್ಧ ಸಚಿವ ಎಂ.ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ್ ನಾಯಕನಂತೆ ವರ್ತಿಸದೇ ಏಕಾಏಕಿ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು. ಬಾಗಲಕೋಟೆ, ದಾವಣಗೆರೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಯತ್ನಾಳ್ ಪ್ರಚಾರ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ನಾಟಕವಷ್ಟೇ ಎಂದು ಆರೋಪಿಸಿದರು.

ಯಡಿಯೂರಪ್ಪ ಹಾಗೂ ಅವರ ಪುತ್ರರ ಹೆಸರನ್ನು ಉಲ್ಲೇಖಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಯತ್ನಾಳ್ ವಿರುದ್ಧ ಬಿಜೆಪಿ ಪಕ್ಷವೇ ಹಲವಾರು ಬಾರಿ ಕ್ರಮ ಕೈಗೊಂಡಿರುವುದನ್ನು ನೆನಪಿಸಿದ ಅವರು, ಪಕ್ಷದೊಳಗಿನ ಸಂಘರ್ಷಗಳೇ ಇಂತಹ ಹೇಳಿಕೆಗಳಿಗೆ ಕಾರಣವಾಗಿವೆ ಎಂದು ಹೇಳಿದರು.

ಇದೇ ವೇಳೆ ವಿಜಯಪುರ ನಗರದ ಅಭಿವೃದ್ಧಿ ವಿಚಾರದಲ್ಲಿ ಯತ್ನಾಳ್ ಮಾತನಾಡುವುದಕ್ಕಿಂತ ಕಾರ್ಯಪ್ರವೃತ್ತರಾಗುವುದು ಮುಖ್ಯ ಎಂದು ಹೇಳಿದ ಸಚಿವರು, ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande