ರಾಜ್ಯಾದ್ಯಂತ ಬಿಸಿಲು ಮುಂದುವರಿಕೆ ; ಕರಾವಳಿ–ಮಲೆನಾಡಿನಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆಯ ಜೊತೆಗೆ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆಯಿಂದಲೇ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ. ಮಧ್ಯಾಹ್ನದ ನ
ಹವಾಮಾನ ಇಲಾಖೆ


ಬೆಂಗಳೂರು, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆಯ ಜೊತೆಗೆ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆಯಿಂದಲೇ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.

ಮಧ್ಯಾಹ್ನದ ನಂತರ ರಾಜ್ಯದ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಗುಡುಗು–ಸಿಡಿಲಿನ ಸಂದರ್ಭಗಳಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ರೈತರು ತಮ್ಮ ಬೆಳೆಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande