
ಬೆಂಗಳೂರು, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಕುರಿತು ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರವು ‘ಉಚಿತ ಯೋಜನೆಗಳ’ ಹೆಸರಿನಲ್ಲಿ ಸಾರ್ವಜನಿಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, “ಇದು ಫ್ರೀ, ಅದು ಫ್ರೀ ಎಂದು ಹೇಳುತ್ತಲೇ ಕನ್ನಡಿಗರ ಜೇಬಿಗೆ ಕತ್ತರಿ ಹಾಕುವುದು ಸರ್ಕಾರದ ಪೂರ್ಣಕಾಲಿಕ ಉದ್ಯೋಗವಾಗಿದೆ” ಎಂದು ಟೀಕಿಸಿದ್ದಾರೆ.
ನೀರಿನ ದರ ಏರಿಕೆಯ ಮೂಲಕ ಮತ್ತೆ ಬೆಂಗಳೂರಿಗರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಉಚಿತ ಯೋಜನೆಗಳ ಹೆಸರಿನಲ್ಲಿ ಬೆಲೆ ಏರಿಕೆಯ ಭಾರವನ್ನು ಜನರು ಅನುಭವಿಸುತ್ತಿರುವುದು ದುರಂತಕರ ಬೆಳವಣಿಗೆ ಎಂದು ಕಿಡಿ ಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa