ಸಾರ್ವಜನಿಕ ಸ್ಥಳಗಳಲ್ಲಿ ‘ಅಕ್ಕ ಪಡೆ’ ಗಸ್ತು ; ಮಹಿಳಾ ಸುರಕ್ಷತೆಗೆ ಆದ್ಯತೆ
ಮೈಸೂರು, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮೈಸೂರು ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ನಡೆಸಿ ಜಾಗೃತಿ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆ, ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ ಹಾಗೂ ಮಾದಕ
Awareness


ಮೈಸೂರು, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮೈಸೂರು ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ನಡೆಸಿ ಜಾಗೃತಿ ಕಾರ್ಯಾಚರಣೆ ನಡೆಸಿತು.

ಈ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆ, ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿವಿಧ ಪೊಲೀಸ್ ಸಹಾಯವಾಣಿಗಳ ಕುರಿತು ಮಾಹಿತಿಯನ್ನು ನೀಡಲಾಯಿತು.

ಜನಸಂದಣಿ ಪ್ರದೇಶಗಳು, ಮಾರುಕಟ್ಟೆ ಹಾಗೂ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಈ ಜಾಗೃತಿ ಕಾರ್ಯ ನಡೆಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande