ಬಸವಣ್ಣನವರ ಆಶಯಗಳೇ ಗ್ಯಾರಂಟಿ ಯೋಜನೆಗಳಿಗೆ ಪ್ರೇರಣೆ : ಶಾಸಕ ಕೆ.ಸಿ.ವೀರೇಂದ್ರ
ಚಿತ್ರದುರ್ಗ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಸವಣ್ಣನವರ ದಾಸೋಹ ಮತ್ತು ಕಾಯಕದ ಸಿದ್ಧಾಂತಗಳೇ ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಮೂಲ ಪ್ರೇರಣೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ
ಜಯಂತಿ


ಚಿತ್ರದುರ್ಗ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಸವಣ್ಣನವರ ದಾಸೋಹ ಮತ್ತು ಕಾಯಕದ ಸಿದ್ಧಾಂತಗಳೇ ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಮೂಲ ಪ್ರೇರಣೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಸೋಮವಾರ ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಣ್ಣ ಜಯಂತಿಯಂದೇ ಪ್ರಮಾಣ ವಚನ ಸ್ವೀಕರಿಸಿದರು. ಇದು ಕಾಕತಾಳೀಯವಲ್ಲ. ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿ, ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಕಡ್ಡಾಯಗೊಳಿಸುವ ಮೂಲಕ ಬಸವ ತತ್ವಕ್ಕೆ ಗೌರವ ನೀಡಿದ್ದಾರೆ. ಸರ್ಕಾರದ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಸಿವು ನೀಗಿಸುವ ಮತ್ತು ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿಯುವ ಬಸವಣ್ಣನವರ ಆಶಯದ ಮುಂದುವರಿದ ಭಾಗವಾಗಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ಸಮಾಜದ ಒಗ್ಗಟ್ಟಿನ ಶಕ್ತಿಯಿಂದಾಗಿ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮುಂದಿನ ವರ್ಷದ ಜಯಂತಿಯನ್ನು ದೊಡ್ಡಮಟ್ಟದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಚರಿಸಬೇಕು. ನಗರದಲ್ಲಿ ಬಸವಣ್ಣನವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸುವ ಸಂಕಲ್ಪ ಮಾಡಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande