
ಬೆಂಗಳೂರು, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಗಾಂಧಿನಗರ ವಿಧಾನಸಭಾ ಕ್ಷೇತ್ರದ ವಾರ್ಡ್-127ರ ಕಾಟನ್ ಪೇಟೆ ವಾರ್ಡ್ ವ್ಯಾಪ್ತಿಯ ಅಕ್ಕಿಪೇಟೆ, ನಾಗಮ್ಮನಗರ ಹಾಗೂ ನೇತಾಜಿನಗರ ಮುಖ್ಯರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ನೇತಾಜಿನಗರದ 3, 4, 5 ಹಾಗೂ 6ನೇ ಅಡ್ಡರಸ್ತೆಗಳಿಗೆ 230 ಎಂ.ಎಂ ವ್ಯಾಸದ ನೂತನ ಸಿಮೆಂಟ್ ಕಾಂಕ್ರೀಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಜೊತೆಗೆ ಅಕ್ಕಿಪೇಟೆ ಮತ್ತು ನಾಗಮ್ಮನಗರ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಇಲ್ಲದೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಧ್ಯೇಯ ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa