ಉಧಂಪುರ್ ಬಸ್ ದುರಂತಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿಗಳು ಸಂತಾಪ ಸೂಚಿಸಿದ್ದು, ಗ
ಉಧಂಪುರ್ ಬಸ್ ದುರಂತಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ


ನವದೆಹಲಿ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿಗಳು ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ ಜೀವಹಾನಿಯಾದ ಸುದ್ದಿ ತಿಳಿದು ನನಗೆ ತುಂಬಾ ದುಃಖವಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ” ಎಂದು ರಾಷ್ಟ್ರಪತಿಗಳು ತಿಳಿಸಿದ್ದಾರೆ.

ಉಧಂಪುರ್ನಲ್ಲಿ ನಡೆದ ಬಸ್ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿರುವಂತೆ, ದುರಂತದಲ್ಲಿ ಮೃತಪಟ್ಟವರ ಹತ್ತಿರದ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೆರವು ನೀಡಲಾಗುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande