ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ್ದು ಆದಿ ಶಂಕರಾಚಾರ್ಯರು
ಬಳ್ಳಾರಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಆಧ್ಯಾತ್ಮ ಶಕ್ತಿ ಆದಿ ಶಂಕರಾಚಾರ್ಯರು ಎಂದು ಡಾ. ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್
ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ್ದು  ಆದಿ ಶಂಕರಾಚಾರ್ಯರು


ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ್ದು  ಆದಿ ಶಂಕರಾಚಾರ್ಯರು


ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ್ದು  ಆದಿ ಶಂಕರಾಚಾರ್ಯರು


ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ್ದು  ಆದಿ ಶಂಕರಾಚಾರ್ಯರು


ಬಳ್ಳಾರಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಆಧ್ಯಾತ್ಮ ಶಕ್ತಿ ಆದಿ ಶಂಕರಾಚಾರ್ಯರು ಎಂದು ಡಾ. ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂಗನಕಲ್ಲು ರಸ್ತೆಯ ಭಾರತಿ ತೀರ್ಥ ಸಭಾಭವನದಲ್ಲಿ ಮಂಗಳವಾರ ನಡೆದ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಮಠಗಳನ್ನು (ದಕ್ಷಿಣದಲ್ಲಿ ಶೃಂಗೇರಿ, ಪಶ್ಚಿಮದಲ್ಲಿ ದ್ವಾರಕಾ, ಪೂರ್ವದಲ್ಲಿ ಪುರಿ ಜಗನ್ನಾಥ ಮತ್ತು ಉತ್ತರದಲ್ಲಿ ಬದರಿನಾಥ) ಸ್ಥಾಪಿಸುವ ಮೂಲಕ ವೇದಾಂತದ ಪುನರುಜ್ಜೀವನ ಮತ್ತು ಹಿಂದೂ ಧರ್ಮದ ಏಕತೆಯನ್ನು ಬಲಪಡಿಸಿದವರು ಎಂದು ಅವರು ಹೇಳಿದರು.

2018 ರಲ್ಲಿ ಸ್ಥಾಪನೆಯಾದ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 2025-26 ನೇ ಸಾಲಿನಲ್ಲಿ ರಾಜ್ಯ ಸರ್ಕಾರ 60 ಕೋಟಿ ರೂ. ಅನುದಾನ ನೀಡಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 20 ರಿಂದ 30 ಕೋಟಿ ರೂ. ಮೀಸಲಿಡಲಾಗಿದ್ದು, ಇದರಲ್ಲಿ ಶೇ. 50 ರಷ್ಟು ಸಬ್ಸಿಡಿ ದೊರೆಯಲಿದೆ. ಬಡ ಬ್ರಾಹ್ಮಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ರಿಂದ 15 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ತುರ್ತು ವೈದ್ಯಕೀಯ ನೆರವಿಗೆ 3 ರಿಂದ 5 ಕೋಟಿ ರೂ. ಹಾಗೂ ಮಹಿಳಾ ಉದ್ಯಮಿಗಳಿಗೆ ನೆರವಾಗಲು 5 ರಿಂದ 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ,

ಬಳ್ಳಾರಿಯ ರಾಮಕೃಷ್ಣ ಆಶ್ರಮದ ಪೂಜ್ಯಶ್ರೀ ಸ್ವಾಮಿ ಮಂಗಳನಾಥಾನಂದಜಿ ಮಹಾರಾಜ್ ಅವರು, ಕೇರಳದ ಕಾಲಡಿಯಲ್ಲಿ ಶಿವಗುರು ಮತ್ತು ಆಯಾರ್ಂಬ ದಂಪತಿಯ ಮಗನಾಗಿ ಹುಟ್ಟಿದ ಶಂಕರಾಚಾರ್ಯರು, ಬಾಲ್ಯದಲ್ಲೇ ಮೇಧಾವಿಗಳಾಗಿದ್ದರು. ಎಂಟನೇ ವಯಸ್ಸಿಗೆ ವೇದಗಳನ್ನು ಅಭ್ಯಾಸ ಮಾಡಿ ತಾಯಿಯ ಅನುಮತಿಯೊಂದಿಗೆ ಸನ್ಯಾಸತ್ವವನ್ನು ಸ್ವೀಕರಿಸಿ, ಅಜರಾಮರರಾದರು.

ಭಜಗೋವಿಂದಂ, ವಿವೇಕ ಚೂಡಾಮಣಿ ಸೇರಿದಂತೆ ಉಪನಿಷತ್ತುಗಳು, ಬ್ರಹ್ಮಸೂತ್ರ ಮತ್ತು ಭಗವದ್ಗೀತೆಯ ಮೇಲೆ ಭಾಷ್ಯಗಳನ್ನು ಬರೆದಿದ್ದಾರೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮುದಾಯದವರನ್ನು ಗಣ್ಯರು ಸನ್ಮಾನಿಸಿ ಗೌರವಿಸಲಾಯಿತು. ಬಳ್ಳಾರಿಯ ಕೆ. ಶಾಂತಶಾಸ್ತ್ರಿ ತಂಡದಿಂದ ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.

ಬಳ್ಳಾರಿಯ ಸಭಾಪತಿ ಬೀದಿಯ ಶ್ರೀ ಶೃಂಗೇರಿ ಶಂಕರಮಠದ ಮಠಾಧಿಕಾರಿ ಕೆ. ರವಿಶಾಸ್ತ್ರಿ, ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande