ಇಡಿ ದಾಳಿ ಮೂಲಕ ಕಾಂಗ್ರೆಸ್ ನಾಯಕರನ್ನು ಕೇಂದ್ರ ಸರ್ಕಾರ ಗುರಿಯಾಗಿಸುತ್ತಿದೆ : ಸಿದ್ದರಾಮಯ್ಯ
ಚಾಮರಾಜನಗರ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಗುಂಡ್ಲುಪೇಟೆಯ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಎನ್.ಎ. ಹ್ಯಾರಿಸ್ ಅವ
Cm


ಚಾಮರಾಜನಗರ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಗುಂಡ್ಲುಪೇಟೆಯ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿ ನಡೆದಿರುವ ಕುರಿತು ಪ್ರತಿಕ್ರಿಯೆ ನೀಡಿದರು.

“ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ದಾಳಿ ಮಾಡುತ್ತಿದೆ. ಬಿಜೆಪಿಯವರ ಮೇಲೆ ಇಂತಹ ದಾಳಿಗಳು ನಡೆಯುತ್ತಿಲ್ಲ. ಇದು ತನಿಖಾ ಸಂಸ್ಥೆಗಳ ದುರುಪಯೋಗ” ಎಂದು ಅವರು ಆರೋಪಿಸಿದರು.

ಮಹಿಳಾ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, “ನಮ್ಮ ವಿರೋಧ ಕ್ಷೇತ್ರ ಮರು ವಿಂಗಡಣೆಗೆ ಮಾತ್ರ. ಮಹಿಳಾ ಮೀಸಲಾತಿಗೆ ಅಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದದ್ದು ಕಾಂಗ್ರೆಸ್. ಬಿಜೆಪಿಯವರೇ ಮಹಿಳಾ ಮೀಸಲಾತಿಗೆ ವಿರೋಧಿಗಳಾಗಿದ್ದರು” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande