

ರಾಯಚೂರು, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಟ ಸಾರ್ವಭೌಮ, ವರನಟ ಡಾ.ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ವರ್ಷವು ಇದೇ ಏ.24 ರಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಹೇಳಿದರು.
ಏಪ್ರಿಲ್ 24ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ.ರಾಜಕುಮಾರ ಜಯಂತಿ ಅರ್ಥಪೂರ್ಣವಾಗಿ ಆಚರಿಸುವ ಕುರಿತು ಅಧಿಕಾರಿಗಳಿಗೆ ನಿರ್ದೆಶನ ನೀಡಿ ಅವರು ಮಾತನಾಡಿದರು.
ಡಾ. ರಾಜಕುಮಾರ್ ಅಭಿಮಾನಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ವಿಶೇಷ ಉಪನ್ಯಾಸಕರನ್ನು ಕರೆಸಿ ಡಾ. ರಾಜಕುಮಾರ ಅವರ ಜೀವನ ಹಾಗೂ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡುವಂತಾಗಬೇಕು. ಪ್ರತಿ ವರ್ಷದಂತೆ ಈ ವರ್ಷ ರಾಯಚೂರು ನಗರದ ಕನ್ನಡ ಭವನದಲ್ಲಿ ಏಪ್ರಿಲ್ 24ರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದರು.
ಬೆಳಿಗ್ಗೆ ಡಾ. ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ, ಅವರ ಚಲನಚಿತ್ರ ಗೀತೆಗಳ ಗಾಯನ, ಡಾ. ರಾಜಕುಮಾರ ಕುರಿತು ಇತರೆ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಸೇರಿದಂತೆ ಇತರೆ ಡಾ.ರಾಜಕುಮಾರ ಅಭಿಮಾನಿ ಬಳಗ, ಕಲಾ ತಂಡಗಳ ಸಹಯೊಗದೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೆಶಕರಾದ ಸುರೇಶ ಜಿ, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ಎ.ಪ್ರಕಾಶ್, ರಮೇಶ ಗೌಡೂರು ಜಾಲಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್