
ಮಂಡ್ಯ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆ ಯಲ್ಲಿ ಇಂದು ಹೈಟೆಕ್ ಹಾರ್ವೆಸ್ಟರ್ ಹಬ್ ಹಾಗೂ ಸೆಕೆಂಡರಿ ಕೃಷಿ ಯೋಜನೆಯಡಿ ಫಲಾನುಭವಿಗಳಿಗೆ ಯಂತ್ರೋಪಕರಣಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಕೃಷಿ ಕೂಲಿ ಕಾರ್ಮಿಕರ ಕೊರತೆಯ ನಡುವೆಯೂ ಸಕಾಲದಲ್ಲಿ ಬೆಳೆ ಕಟಾವು ಮಾಡಲು ಹಾಗೂ ಬೆಳೆದ ಉತ್ಪನ್ನಗಳಿಗೆ ಮೌಲ್ಯವರ್ಧನೆ ತಂದುಕೊಡಲು ಈ ಆಧುನಿಕ ಯಂತ್ರೋಪಕರಣಗಳು ರೈತರಿಗೆ ಬಹಳ ಸಹಕಾರಿಯಾಗಲಿವೆ ಎಂದು ಹೇಳಿದರು.
ರೈತರು ಕೇವಲ ಸಾಂಪ್ರದಾಯಿಕ ಕೃಷಿ ಪದ್ಧತಿಗಳಿಗೆ ಸೀಮಿತವಾಗದೆ, ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎನ್ನುವುದೇ ಸರ್ಕಾರದ ಆಶಯವಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಪ್ರತಿಯೊಬ್ಬ ರೈತನಿಗೂ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ತಲುಪಬೇಕು. ಮಂಡ್ಯ ಜಿಲ್ಲೆಯನ್ನು ಕೃಷಿ ಕ್ಷೇತ್ರದಲ್ಲಿ ಮಾದರಿಯ ಜಿಲ್ಲೆಯಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಎ. ಬಿ. ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆರ್. ನಂದಿನಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa