
ಚಾಮರಾಜನಗರ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಅದಕ್ಕಾಗಿಯೇ ನಾನು ಚಾಮರಾಜನಗರಕ್ಕೆ ಅನೇಕ ಬಾರಿ ಭೇಟಿ ನೀಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುಂಡ್ಲುಪೇಟೆಯ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾಮರಾಜನಗರಕ್ಕೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ನಾನು ಪ್ರಾಸಂಗಿಕವಾಗಿ ಹೇಳಿದ್ದೆ. ನನಗೆ ಮೂಢನಂಬಿಕೆಗಳಲ್ಲಿ ನಂಬಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಆಮ್ಲಜನಕ ದುರಂತದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕ್ಷೇತ್ರದಲ್ಲಿ ಮೃತಪಟ್ಟವರಿಗೆ ಮಾತ್ರ ಪರಿಹಾರ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, “ಎಲ್ಲರಿಗೂ ಪರಿಹಾರ ನೀಡಲಾಗುತ್ತಿದೆ. ನಮ್ಮ ಗಮನಕ್ಕೆ ಬಂದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಶಾಸಕರು ಕೇಳಿದರೂ ಪರಿಹಾರ ಕೊಡುತ್ತೇವೆ” ಎಂದರು.
ಇದೇ ವೇಳೆ ತೃತೀಯ ಭಾಷೆಗೆ ಅಂಕ ನೀಡುವ ವಿಚಾರವಾಗಿ ಮಾತನಾಡಿದ ಅವರು, ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕ ನೀಡಬೇಕು ಎಂದು ನ್ಯಾಯಾಲಯ ಹೇಳಿರುವುದರಿಂದ ಸರ್ಕಾರ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa