ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ವಿರೋಧಿಗಳಿಗೆ ಗೊತ್ತಾಗಿದೆ : ಸಿದ್ದರಾಮಯ್ಯ
ಚಾಮರಾಜನಗರ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಈಗ ಅದನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವ
Cm


ಚಾಮರಾಜನಗರ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಈಗ ಅದನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವರಿಗೆ ಈಗ ಅವು ಬಡವರ ಪರ ಕಾರ್ಯಕ್ರಮಗಳೆಂದು ಅರ್ಥವಾಗಿದೆ. ಅದಕ್ಕಾಗಿಯೇ ಅವರೂ ಅದೇ ಮಾದರಿಯ ಯೋಜನೆಗಳನ್ನು ಘೋಷಿಸುತ್ತಿದ್ದಾರೆ” ಎಂದರು.

ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ತೀರ್ಮಾನ ಕೈಗೊಳ್ಳುವ ಸಂದರ್ಭದಲ್ಲಿ ಅಲ್ಪಸಂಖ್ಯಾತರ ನಾಯಕರು ಉಪಸ್ಥಿತರಿದ್ದರು. ಅವರ ಸಮ್ಮುಖದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ನಂತರ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ ಎಂದರು.

ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂಬ ವಿಶ್ವಾಸವನ್ನೂ ಮುಖ್ಯಮಂತ್ರಿ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande