ಬಂಗಾಳದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಖಚಿತ : ರೇಖಾ ಗುಪ್ತಾ ವಿಶ್ವಾಸ
ಕೋಲ್ಕತ್ತಾ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನದ ದಿನಾಂಕ ಸಮೀಪಿಸುತ್ತಿದ್
ರೇಖಾ ಗುಪ್ತಾ


ಕೋಲ್ಕತ್ತಾ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಬಿಜೆಪಿಯ ಮೇಲಿನ ಜನರ ವಿಶ್ವಾಸ ಹೆಚ್ಚುತ್ತಿದ್ದು, ಕಳೆದ 15 ವರ್ಷಗಳಿಂದ ಭಯ ಮತ್ತು ಒತ್ತಡದ ರಾಜಕೀಯವನ್ನು ಎದುರಿಸಿರುವ ಜನರು ಈಗ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದರು.

“ಈ ಬಾರಿ ಬಂಗಾಳದಲ್ಲಿ ಕಮಲದ ಚಿಹ್ನೆಯ ಸರ್ಕಾರ ರಚನೆಯಾಗಲಿದೆ. ಮೇ 4ರಂದು ಫಲಿತಾಂಶ ಹೊರಬಂದಾಗ ಅದು ಹೊಸ ಸೂರ್ಯೋದಯದಂತಿರುತ್ತದೆ. ಎಲ್ಲರಿಗೂ ಗೌರವ ಸಿಗುವ ಆಡಳಿತ ಬರಲಿದೆ,” ಎಂದು ರೇಖಾ ಗುಪ್ತಾ ಹೇಳಿದರು.

ರಾಜ್ಯದ ಹಾಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಶ್ಚಿಮ ಬಂಗಾಳ ಹಲವು ವರ್ಷಗಳಿಂದ ಸಂಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಹೇಳಿದರು. ವಿಶೇಷವಾಗಿ ಮಹಿಳೆಯರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

“ಮಹಿಳೆಯರು ಮತ್ತು ಹೆಣ್ಣುಮಕ್ಕಳು ಹೇಗೆ ಬದುಕುತ್ತಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೂಂಡಾಗಿರಿ ನಡೆಸುತ್ತಿದೆ. ಮಹಿಳೆಯರು ಸುರಕ್ಷಿತವಾಗಿಲ್ಲ. ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಾದರಿಯ ಘಟನೆಗಳು ಮಹಿಳಾ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ತೃಪ್ತಿಕರವಾಗಿಲ್ಲ ಎಂಬುದನ್ನು ತೋರಿಸುತ್ತವೆ,” ಎಂದು ಹೇಳಿದರು.

ರಾಜ್ಯದ ಭ್ರಷ್ಟಾಚಾರದ ವಿಚಾರವನ್ನೂ ಅವರು ಎತ್ತಿಹಿಡಿದರು. ‘ಕಟ್ ಮನಿ’ ಇಲ್ಲದೆ ಸರ್ಕಾರಿ ಉದ್ಯೋಗಗಳು ಅಥವಾ ಇತರ ಸರ್ಕಾರಿ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪಿಸಿದ ಅವರು, ರೈತರಿಗೆ ಸರಿಯಾದ ಪಾವತಿ ಸಿಗುತ್ತಿಲ್ಲ, ಯುವಕರು ನಿರುದ್ಯೋಗದಿಂದ ಬಳಲುತ್ತಿದ್ದಾರೆ ಹಾಗೂ ಮಹಿಳೆಯರು ಅಸುರಕ್ಷತೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಅವರು ಇತರರಿಗೆ ಪ್ರತಿಕ್ರಿಯೆ ನೀಡುವುದಕ್ಕಿಂತ ಜನರ ಧ್ವನಿಯನ್ನು ಕೇಳಬೇಕು ಮತ್ತು ತಮ್ಮ ಚುನಾವಣಾ ಪ್ರಚಾರದ ಮೇಲೆ ಗಮನ ಹರಿಸಬೇಕು ಎಂದು ರೇಖಾ ಗುಪ್ತಾ ಸಲಹೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande