
ಬಳ್ಳಾರಿ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಯುಜಿಸಿ-ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಿದೆ. ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.
ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗು ಯುಜಿಸಿ ನಡೆಸಲಿರುವ ರಾಷ್ಟç ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕ (ಜಿ.ಆರ್.ಎಫ್) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಏ.24 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 04.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಾಗೇಶ್ ಎಂ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್