
ಬಳ್ಳಾರಿ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಪ್ಸಿಲಾನ್ ಕಾರ್ಬನ್ ಪ್ರೈ.ಲಿ. ಮತ್ತು ಧ್ರುವ ಸೋಲಾರ್ ಪವರ್ ಕಂಪನಿಗಳು ಭಾಗವಹಿಸಲಿವೆ. ವಿದ್ಯಾರ್ಹತೆ: ಐಟಿಐ (ಫಿಟ್ಟರ್) ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್