
ಬಳ್ಳಾರಿ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯ ನಗರದ ಕಾಳಮ್ಮ ಬೀದಿಯ ನಿವಾಸಿ ಬಿ. ನರಸಣ್ಣ (50) ಏಪ್ರಿಲ್ 06 ರಂದು ಹೊರ ಹೋಗಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ: ಅಂದಾಜು ಎತ್ತರ 5.5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಸಣ್ಣ ಕೂದಲು, ಚಿಕ್ಕ ಮೀಸೆ ಹೊಂದಿದ್ದು, ಎಡ ಮೊಣಕೈಯ ಮೇಲೆ ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟ್ ಪೊಲೀಸ್ ಠಾಣೆ ದೂ.08392-272022, ಪಿಎಸ್ಐ ಮೊ.9480803081, ಪಿಐ ಮೊ.9480803045, ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್