ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ
ಬೆಂಗಳೂರು, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸಿದರು. ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು
ಪ್ರಶಿಕ್ಷಣ ಮಹಾಭಿಯಾನ


ಬೆಂಗಳೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸಿದರು.

ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಉದ್ಘಾಟಿಸಿದರು. ಈ ಪ್ರಶಿಕ್ಷಣ ವರ್ಗದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಕೇಂದ್ರ ಸಚಿವರು ಹಾಗೂ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರು ಉಪಸ್ಥಿತರಿದ್ದರು.

ದಕ್ಷಿಣ ಭಾರತದ ಸಂಘಟನಾ ಬಲವರ್ಧನೆ, ಕಾರ್ಯಕರ್ತರ ತರಬೇತಿ, ಪಕ್ಷದ ಸಿದ್ಧಾಂತಗಳ ಪ್ರಚಾರ ಹಾಗೂ ಭವಿಷ್ಯದ ಚುನಾವಣಾ ಸಿದ್ಧತೆಯ ಕುರಿತಾಗಿ ಈ ಮಹಾಭಿಯಾನದಲ್ಲಿ ಚರ್ಚೆಗಳು ನಡೆದವು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande