ಬಸವಣ್ಣನವರ ಬೋಧನೆಗಳ ಆಧಾರದಲ್ಲಿ ಸಮಾನತೆಯ ಸಮಾಜ ನಿರ್ಮಿಸೋಣ : ಉಪರಾಷ್ಟ್ರಪತಿ
ಬೀದರ್, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿರುವ ಶ್ರೀ ಚನ್ನಬಸವಾಶ್ರಮದಲ್ಲಿ ನಡೆದ ಡಾ. ಬಸವಲಿಂಗ ಪಟ್ಟದ್ದೇವರು ಮಹಾಸ್ವಾಮೀಜಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ
VP


ಬೀದರ್, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿರುವ ಶ್ರೀ ಚನ್ನಬಸವಾಶ್ರಮದಲ್ಲಿ ನಡೆದ ಡಾ. ಬಸವಲಿಂಗ ಪಟ್ಟದ್ದೇವರು ಮಹಾಸ್ವಾಮೀಜಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಡಾ. ಬಸವಲಿಂಗ ಪಟ್ಟದ್ದೇವರು ಮಹಾಸ್ವಾಮೀಜಿಯವರ ಸಮಾಜಮುಖಿ ಸೇವೆ, ಧಾರ್ಮಿಕ ಚಿಂತನೆ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಅವರನ್ನು ಕರುಣೆ, ಸೇವೆ ಮತ್ತು ಮಾನವೀಯ ಮೌಲ್ಯಗಳ ನಿಜವಾದ ಸಾಕಾರರೂಪ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ, ಜಗಜ್ಯೋತಿ ಬಸವಣ್ಣ ಅವರ ಜೀವನ ಮತ್ತು ಬೋಧನೆಗಳನ್ನು ಸ್ಮರಿಸಿದ ಉಪರಾಷ್ಟ್ರಪತಿಗಳು, ಸಮಾನತೆ, ಕರುಣೆ ಮತ್ತು ಧರ್ಮದ ಆಧಾರದ ಮೇಲೆ ಸಮಾಜವನ್ನು ಕಟ್ಟಬೇಕೆಂದು ಕರೆ ನೀಡಿದರು. ಬಸವಣ್ಣನವರ ತತ್ವಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿದ್ದು, ಅವುಗಳಿಂದ ಸ್ಫೂರ್ತಿ ಪಡೆದು ನ್ಯಾಯಸಮ್ಮತ ಮತ್ತು ಸಮಾನತೆಯ ಸಮಾಜ ನಿರ್ಮಾಣದತ್ತ ಜನರು ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಹೀಮ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande