
ಮಂಗಳೂರು, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಯಾವುದೇ ಷರತ್ತುಗಳಿಲ್ಲದೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಗಳ ಭಾಗವಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ, ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬಾಗಲಕೋಟೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕಗಳ ವತಿಯಿಂದ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು. ಮಹಿಳೆಯರ ರಾಜಕೀಯ ಪ್ರತಿನಿಧಿತ್ವವನ್ನು ಹೆಚ್ಚಿಸುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯ ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa