

ಬಳ್ಳಾರಿ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಮೇ 01 ರಂದು ಭಗವಾನ್ ಬುದ್ಧ ಜಯಂತಿ ಹಾಗೂ ಮೇ 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಮಹನೀಯರ ಜಯಂತಿಗಳನ್ನು ಶಿಷ್ಟಾಚಾರದ ಅನ್ವಯ ಆಚರಿಸಬೇಕಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಮೇ 01 ರಂದು ಭಗವಾನ್ ಬುದ್ಧ ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಂಗಂ ವೃತ್ತದ ಮಾರ್ಗವಾಗಿ ಸಾಂಸ್ಕøತಿಕ ಹೊಂಗಿರಣ ಸಭಾಂಗಣದವರೆಗೆ ನಡೆಯಲಿದೆ. ಬಳಿಕ 06 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮೇ 01 ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವೂ ಆಗಿರುವುದರಿಂದ, ರಜೆ ಇರುತ್ತದೆ. ಹಾಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅದೇ ರೀತಿಯಾಗಿ ಮೇ 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ನಗರದ ಬಸವ ಭವನದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಂದು ಸಂಜೆ 05 ಗಂಟೆಗೆ ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಬಳಿಕ ಸಂಜೆ 06.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ಜಯಂತಿ ಮೆರವಣಿಗೆಗಳಲ್ಲಿ ವಿವಿಧ ಸಾಂಸ್ಕøತಿಕ ಕಲಾ ತಂಡಗಳನ್ನು ನಿಯೋಜಿಸಲಾಗುವುದು. ಮೆರವಣಿಗೆಯ ಹಾದಿಯಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತ್ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬ್ಯಾನರ್ ಅಳವಡಿಕೆ ಕುರಿತಂತೆ ಮಹಾನಗರ ಪಾಲಿಕೆ ವತಿಯಿಂದ ಕಡ್ಡಾಯ ಅನುಮತಿ ಪಡೆಯಬೇಕು. ಮಹನೀಯರ ಶಾಂತಿ ತತ್ವಗಳ ಕುರಿತು ನುರಿತರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
ಬುದ್ಧ ಜಯಂತಿಯಂದು ಸರ್ಕಾರಿ ವಸತಿ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಶಿಬಿರ ಆಯೋಜಿಸಬೇಕು ಎಂದು ಮುಖಂಡರೊಬ್ಬರು ಸಭೆಯಲ್ಲಿ ಪ್ರಸ್ತಾಪಿಸಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಕುರಿತಂತೆ ತಮ್ಮ ಸಲಹೆ-ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ತೋಟಗಾರಿಕೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್