
ಕುರುಗೋಡು, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಒಂದು ವಾಹನ ಹಾಗೂ 82,300 ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಆಂಧ್ರಪ್ರದೇಶದ ಆದೋನಿ ನಿವಾಸಿ ಶೇಕ್ಷಾವಲಿ, ಮಾನ್ವಿಯ ವಿನೋದ್ ಮತ್ತು ಹಾಲದಾಳ್ ವೀರಭದ್ರ ಬಂಧಿತ ಆರೋಪಿಗಳು. ಬಂಧಿತರಿಂದ
ರೂಪಾಯಿ 87300 ಮೌಲ್ಯದ, 17. 460 ಟನ್ ಪಡಿತರ ಅಕ್ಕಿ, ಒಂದು ಈಚರ್ ಕಂಪನಿಯ ಮಿನಿ ಲಾರಿಯನ್ನು ಜಪ್ತಿ ಮಾಡಲಾಗಿದೆ. ಬಂಧಿತರು ನೆಲ್ಲುಡಿ ಕೊಟ್ಟಾಲದ ಬಳಿ ಅಕ್ಕಿಯನ್ನು ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್