ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ : ಆರ್. ಅಶೋಕ ಕಿಡಿ
ಬೆಂಗಳೂರು, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಉಂಟಾಗಿದ್ದು, ಬಡ ರೋಗಿಗಳ ಕುಟುಂಬಗಳು ಹೊರಗಿನಿಂದ ಔಷಧಿ ಖರೀದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯ
Ashok


ಬೆಂಗಳೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಉಂಟಾಗಿದ್ದು, ಬಡ ರೋಗಿಗಳ ಕುಟುಂಬಗಳು ಹೊರಗಿನಿಂದ ಔಷಧಿ ಖರೀದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖಜಾನೆ ಖಾಲಿ ಸರ್ಕಾರಕ್ಕೆ ಔಷಧಿ ಖರೀದಿಗೂ ಗತಿ ಇಲ್ಲ” ಎಂದು ಆರೋಪಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆಯಿಂದಾಗಿ ಬಡ ರೋಗಿಗಳ ಕುಟುಂಬಗಳು ಹೊರಗೆ ಹೋಗಿ ಔಷಧಿ ಖರೀದಿಸಬೇಕಾದ ಅನಿವಾರ್ಯತೆ ಎದುರಿಸುತ್ತಿವೆ. ಔಷಧಿ ಖರೀದಿಗೆ ಅನುಮೋದನೆ ನೀಡಲಾಗಿದೆ ಎಂದು ಸದನದಲ್ಲಿ ಉತ್ತರ ನೀಡಿದ್ದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಆರ್. ಅಶೋಕ ಎತ್ತಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆ ಖಚಿತಪಡಿಸಬೇಕು. ಇಲ್ಲವಾದರೆ ಈ ವಿಷಯದಲ್ಲಿ ಜನರ ಆಕ್ರೋಶ ಇನ್ನಷ್ಟು ಹೆಚ್ಚಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ಆರೋಗ್ಯದ ಜೊತೆ ಸರ್ಕಾರ ನಿರ್ಲಕ್ಷ್ಯ ತೋರಬಾರದು. ಬಡವರ ಆರೋಗ್ಯ ಸೇವೆಗೆ ಅಗತ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಆರ್. ಅಶೋಕ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande