ಬಂಗಾಳದಲ್ಲಿ 92% ಮತದಾನ : ಪ್ರಜಾಪ್ರಭುತ್ವ ಬಲಗೊಳ್ಳುತ್ತಿದೆ-ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್
ನವದೆಹಲಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲಾಗಿರುವ ಶೇ.92ಕ್ಕೂ ಅಧಿಕ ಮತದಾನ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ಸಂತೋಷ ವ್ಯಕ್ತಪಡಿಸಿದ್ದಾರೆ. “ಭಾರತದ ಪ್ರಜೆಯಾಗಿ ಮತದಾನದ ಪ್ರಮಾಣವನ್ನು ನೋಡಿ ತುಂಬಾ ಸಂತ
SC


ನವದೆಹಲಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲಾಗಿರುವ ಶೇ.92ಕ್ಕೂ ಅಧಿಕ ಮತದಾನ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ಸಂತೋಷ ವ್ಯಕ್ತಪಡಿಸಿದ್ದಾರೆ.

“ಭಾರತದ ಪ್ರಜೆಯಾಗಿ ಮತದಾನದ ಪ್ರಮಾಣವನ್ನು ನೋಡಿ ತುಂಬಾ ಸಂತೋಷವಾಗಿದೆ. ಜನರು ಹೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಿದಾಗ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು. ಮತದ ಮಹತ್ವವನ್ನು ಜನರು ಅರಿತುಕೊಳ್ಳುವಂತೆ ಆಗುತ್ತಿರುವುದು ಹಿಂಸಾಚಾರವನ್ನು ತಡೆಯಲು ಸಹಕಾರಿಯಾಗಿದೆ ಎಂದೂ ಹೇಳಿದರು.

ಈ ಸಂದರ್ಭ ನ್ಯಾಯಮೂರ್ತಿ ನ್ಯಾಯಮೂರ್ತಿ ಬಾಗ್ಚಿ ಮಾತನಾಡಿ, ದೊಡ್ಡ ಪ್ರಮಾಣದ ಹಿಂಸಾಚಾರದ ಘಟನೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ. “ಯುದ್ಧಗಳು ರಾಜರ ನಡುವೆ ನಡೆಯುತ್ತವೆ, ಆದರೆ ಸಾಮಾನ್ಯ ಜನರು ಪ್ರಾಣ ಕಳೆದುಕೊಳ್ಳುತ್ತಾರೆ” ಎಂದು ಅವರು ಅಭಿಪ್ರಾಯಪಟ್ಟರು.

ಇನ್ನೊಂದೆಡೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಶೇ.92ರಷ್ಟು ಮತದಾನವನ್ನು ಐತಿಹಾಸಿಕವೆಂದು ಬಣ್ಣಿಸಿದ್ದಾರೆ. ಕೆಲವು ಸಣ್ಣ ಘಟನೆಗಳನ್ನು ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಕೇಂದ್ರ ಪಡೆಗಳು ಉತ್ತಮ ಕಾರ್ಯನಿರ್ವಹಣೆ ಮಾಡಿವೆ ಎಂದು ಹೇಳಿದರು.

ಒಟ್ಟಾರೆ, ಹೆಚ್ಚಿನ ಮತದಾನವು ಪ್ರಜಾಪ್ರಭುತ್ವದ ಬಗ್ಗೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತಿದ್ದು, ಬಂಗಾಳದಲ್ಲಿ ರಾಜಕೀಯ ಜಾಗೃತಿ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande