ಚೌಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷ ರೂಪಾಯಿ ದೇಣಿಗೆ
ಬಳ್ಳಾರಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಪರಮದೇವನಹಳ್ಳಿ ಸಮೀಪದ ಚಾಗನೂರು ಕಾರ್ಯಕ್ಷೇತ್ರದಲ್ಲಿ ಇರುವ ಶ್ರೀ ಚೌಡೇಶ್ವರಿ ದೇವಸ್ಥಾನದ ನಿರ್ಮಾಣ ಹಾಗೂ ಜೀರ್ಣೋದ್ಧಾರಕ್ಕಾಗಿ ರೂಪಾಯಿ 2 ಲಕ್ಷ ಅನುದಾನವನ್ನು ದೇವಸ್ಥಾನ ಅಭಿವೃದ
ಚೌಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷ ರೂಪಾಯಿ ದೇಣಿಗೆ


ಬಳ್ಳಾರಿ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಪರಮದೇವನಹಳ್ಳಿ ಸಮೀಪದ ಚಾಗನೂರು ಕಾರ್ಯಕ್ಷೇತ್ರದಲ್ಲಿ ಇರುವ ಶ್ರೀ ಚೌಡೇಶ್ವರಿ ದೇವಸ್ಥಾನದ ನಿರ್ಮಾಣ ಹಾಗೂ ಜೀರ್ಣೋದ್ಧಾರಕ್ಕಾಗಿ ರೂಪಾಯಿ 2 ಲಕ್ಷ ಅನುದಾನವನ್ನು ದೇವಸ್ಥಾನ ಅಭಿವೃದ್ಧಿಗಾಗಿ ನೀಡಿದೆ.

ಜಿಲ್ಲಾ ನಿರ್ದೇಶಕರಾದ ರೋಹಿತಾಕ್ಷ ಅವರು ದೇವಸ್ಥಾನ ಸಮಿತಿಗೆ 2 ಲಕ್ಷ ರೂಪಾಯಿ ಮೊತ್ತದ ಡಿಡಿಯನ್ನು ನೀಡಿ,

ದೇವಸ್ಥಾನದ ಧಾರ್ಮಿಕ ಆಚರಣೆಗಳು ಮತ್ತು ಅಭಿವೃದ್ಧಿಗಾಗಿ ಈ ಹಣವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಬಳ್ಳಾರಿ ತಾಲೂಕಿನ ಯೋಜನಾಧಿಕಾರಿಗಳಾದ ಬಸವರಾಜ ಅವರು, `ಜನಮಂಗಳ' ಹಾಗೂ `ಪ್ರಗತಿ ನಿಧಿ' ಯೋಜನೆಯಡಿ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಕುರಿತು ಮಾಹಿತಿ ನೀಡಿದರು.

ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು, ವಲಯ ಮೇಲ್ವಿಚಾರಕರು ಹಾಗೂ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ರಾಮುಡು, ಕಾರ್ಯದರ್ಶಿ ದಿವಾಕರ್, ಖಜಾಂಚಿ ಬಿ. ಎರ್ರಿಸ್ವಾಮಿ ಇನ್ನಿತರರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande