ವಿದ್ಯಾರ್ಥಿಗಳ ಆತ್ಮಗೌರವ ಕಾಪಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಕೆಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ಘಟನೆ ಕುರಿತು ಸಚಿಚ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ಈಗಾಗಲೇ ಪೊಲೀಸರಿಗೆ ತಿಳಿಸಲಾಗಿದ್ದು, ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ವಿದ್ಯಾರ್ಥಿಗಳ ಆತ್ಮಗೌರವ ಕಾಪಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್


ಬೆಂಗಳೂರು, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಕೆಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ಘಟನೆ ಕುರಿತು ಸಚಿಚ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣ ಈಗಾಗಲೇ ಪೊಲೀಸರಿಗೆ ತಿಳಿಸಲಾಗಿದ್ದು, ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಂದ ಕಿವಿಯೋಲೆ, ಬಳೆ, ಹಿಜಾಬ್ ಅಥವಾ ಜನಿವಾರ ತೆಗೆಸುವುದು, ಹಾಗೆಯೇ ಉದ್ದನೆಯ ತೋಳಿಗೆ ಕತ್ತರಿ ಹಾಕುವುದು ಎಂಬಂತಹ ಕ್ರಮಗಳನ್ನು ಅವರು “ಅಮಾನವೀಯ ಮತ್ತು ಖಂಡನೀಯ” ಎಂದು ಕರೆದಿದ್ದಾರೆ. ಇಂತಹ ನಡೆ ವಿದ್ಯಾರ್ಥಿಗಳ ಮನೋಸ್ಥೈರ್ಯ ಕುಗ್ಗಿಸುವುದಾಗಿ ಅವರು ಹೇಳಿದರು.

“ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸುವ ತಾಣಗಳಾಗಬೇಕು; ಅವರ ಆತ್ಮಗೌರವಕ್ಕೆ ಧಕ್ಕೆ ತರುವ ಸ್ಥಳಗಳಾಗಬಾರದು,” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, “ಈ ಘಟನೆಗಳಿಂದ ಧೃತಿಗೆಡಬೇಡಿ. ಓದು ಮತ್ತು ಪರಿಶ್ರಮದ ಮೂಲಕ ಯಶಸ್ಸಿನ ದಾರಿಯಲ್ಲಿ ಮುಂದುವರಿಯಿರಿ. ಸರ್ಕಾರ ನಿಮ್ಮ ಬೆನ್ನಿಗಿದೆ,” ಎಂದು ಸಂದೇಶ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande