
ಗದಗ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ ತಾಲೂಕಿನ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿದ್ಯಾರ್ಥಿಗಳು ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. ೯೬.೧೫ ರಷ್ಟು ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಶಿರಹಟ್ಟಿ ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಕಬಳಿಗೇರಿ ಗ್ರಾಮ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮಜ್ಜಿಗುಡ್ಡ ಗ್ರಾಮ, ಪರಿಶಿಷ್ಟ ಪಂಗಡದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಬನ್ನಿಕೊಪ್ಪ ಗ್ರಾಮ, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮಾಡಲಗೇರಿ ಗ್ರಾಮ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಬೆಳ್ಳಟ್ಟಿ ಗ್ರಾಮ, ಒಟ್ಟು ೭ ವಸತಿ ನಿಲಯಗಳ ಪೈಕಿ ೫ ವಸತಿ ನಿಲಯಗಳು ಶೇ. ೧೦೦ ರಷ್ಟು ಫಲಿತಾಂಶ ದಾಖಲಿಸಿವೆ.
ಕುಮಾರ ಎಸ್. ಲಮಾಣಿ ಕಬಳಿಗೇರಿ ನಿಲಯ ೫೩೨ ಅಂಕಗಳನ್ನು ಶೇ. ೮೫.೧೨ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ನಿಖಿಲ್ ರೇವಣಕಾರ್: ೫೧೨ ಅಂಕಗಳನ್ನು ಶೇ. ೮೧.೯೨ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಕುಮಾರ ಕುರಿ: ಬೆಳ್ಳಟ್ಟಿ ನಿಲಯ ೫೨೭ ಅಂಕಗಳನ್ನು ಶೇ. ೮೪.೩೨ ಗಳಿಸಿದ್ದಾರೆ. ಕುಮಾರಿ ಅರ್ಚನಾ ಎಫ್. ಕಾಲೀ: ಶಿರಹಟ್ಟಿ ನಿಲಯ ೫೦೨ ಅಂಕಗಳನ್ನು ಶೇ. ೮೦.೩೨ ಪಡೆದು ಗಮನ ಸೆಳೆದಿದ್ದಾರೆ.
ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾರಣರಾದ ವಸತಿ ನಿಲಯಗಳ ಮೇಲ್ವಿಚಾರಕರು, ಅಡುಗೆ ಸಿಬ್ಬಂದಿ ಹಾಗೂ ವಿಶೇಷವಾಗಿ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ. ಬಡತನದ ನಡುವೆಯೂ ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಇಂತಹ ಯಶಸ್ಸು ಸಾಧ್ಯ ಎಂಬುದನ್ನು ನಮ್ಮ ನಿಲಯದ ವಿದ್ಯಾರ್ಥಿಗಳು ಸಾಬೀತುಪಡಿಸಿದ್ದಾರೆ, ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP