
ಬೆಂಗಳೂರು, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಿಕ್ಕಟ್ಟು ಸಮಭಾವದಿಂದ ಬಗೆಹರಿಸಿದ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ನಾಯಕರು ಹಾಗೂ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಸಚಿವರಾದ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ ಎಚ್.ಆಂಜನೇಯ ಹಾಗೂ ಸಮುದಾಯದ ಶಾಸಕರ ನೇತೃತ್ವದ ನಿಯೋಗವು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿತು.
ಒಳಮೀಸಲಾತಿ ಬೇಡಿಕೆಯನ್ನು ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸಮತೋಲನದಿಂದ ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಮುಖಂಡರು ತಿಳಿಸಿದ್ದಾರೆ. ಈ ನಿರ್ಧಾರದಿಂದ ಪರಿಶಿಷ್ಟ ಜಾತಿಗಳ ವಿವಿಧ ಉಪಸಮುದಾಯಗಳಿಗೆ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa