

ಕೊಪ್ಪಳ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂಡೂರಿನ ಶಿಕ್ಷಕ, ಕೊಪ್ಪಳದ ಅಲ್ತಾಫ್ ಹುಸೇನ್ ಮಕಾನದಾರ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪೆÇ್ರ. ಸಂಜೀವ್ ಆರ್. ಇನಾಮದಾರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ''Photophysical Characterization of Nanoparticle Fluorophore Systems' ವಿಷಯದ ಸಂಶೋಧನಾ ಮಹಾ ಪ್ರಬಂಧಕ್ಕೆ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ನಡೆದ 75ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಿಎಚ್.ಡಿ ಪದವಿಯನ್ನು ವಿತರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್