ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ; ಐವರು ಸ್ಥಳದಲ್ಲೇ ಸಾವು
ಮೌ (ಉತ್ತರ ಪ್ರದೇಶ),25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದo ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಈ ದುರ್ಘಟನೆ ದೋಹ್ರಿಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಸತ್ಪುರ್ ಅಹಿರಾನಿ ಹೆದ್ದಾರಿಯಲ್ಲಿ ಮಧ್ಯ
Accident


ಮೌ (ಉತ್ತರ ಪ್ರದೇಶ),25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದo ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಈ ದುರ್ಘಟನೆ ದೋಹ್ರಿಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಸತ್ಪುರ್ ಅಹಿರಾನಿ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಸ್ಕಾರ್ಪಿಯೋ ವಾಹನವು ತನ್ನ ಪಥದಿಂದ ನಿಯಂತ್ರಣ ತಪ್ಪಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರೇಲರ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ, ವಾಹನದಲ್ಲಿದ್ದ ಎಲ್ಲಾ ಐವರು ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಸಾಕುಪ್ರಾಣಿ ನಾಯಿಯೂ ಕೂಡ ಅಪಘಾತದಲ್ಲಿ ಸಾವನ್ನಪ್ಪಿದೆ.

ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮೃತರನ್ನು ಗೋರಖ್ಪುರ ಜಿಲ್ಲೆಯ ನಿವಾಸಿಗಳಾದ ವಿನಯ ಶ್ರೀವಾಸ್ತವ (53), ಅವರ ಪತ್ನಿ ಅರ್ಚನಾ ಶ್ರೀವಾಸ್ತವ (48), ಪುತ್ರ ಕೃತಾರ್ಥ ಶ್ರೀವಾಸ್ತವ (27) ಹಾಗೂ ಗಯಾ ಜಿಲ್ಲೆಯ ರವೀಂದ್ರ ಯಾದವ್ (20) ಮತ್ತು ಪುರುಷೋತ್ತಮ್ ಕುಮಾರ್ (28) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕುಟುಂಬವು ರಾಂಚಿಯಲ್ಲಿ ನಡೆದ ಮಗಳ ಮದುವೆ ಕಾರ್ಯಕ್ರಮವನ್ನು ಪೂರ್ಣಗೊಳಿಸಿ ತಮ್ಮ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande