

ವಿಜಯಪುರ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ಜರುಗಿತು.
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳ ಸಮಸ್ಯೆಗಳು, ಕಲ್ಯಾಣ ಯೋಜನೆಗಳ ಅನುಷ್ಠಾನ ಹಾಗೂ ಹಕ್ಕುಗಳ ರಕ್ಷಣೆಯ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಆಯೋಗದ ಸದಸ್ಯರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮುದಾಯದ ಅಭಿವೃದ್ದಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಭೆ ಸಮುದಾಯದ ಕಲ್ಯಾಣದ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande