ಬಾಗಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ ; ವಾಹನ ಸಮೇತ ವಶಕ್ಕೆ
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಾಹನ ಸಮೇತ ವಶಕ್ಕೆ ಪಡೆದ ಘಟನೆ ನಡೆದಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಬ
ಅಕ್ಕಿ


ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಾಹನ ಸಮೇತ ವಶಕ್ಕೆ ಪಡೆದ ಘಟನೆ ನಡೆದಿದೆ.

ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಬಾಗಲಕೋಟೆ ತಹಶೀಲ್ದಾರರ ನಿರ್ದೇಶನದ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಆಹಾರ ಶಿರಸ್ತೆದಾರ ಪ್ರಕಾಶ ಷೇರಖಾನೆ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಪರಿಶೀಲನೆಯ ಸಂದರ್ಭದಲ್ಲಿ ಪಡಿತರ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಣೆ ಮಾಡಲಾಗುತ್ತಿರುವುದು ದೃಢಪಟ್ಟಿದೆ.

ಅಕ್ರಮ ಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ವಾಹನವನ್ನು ಜಪ್ತಿ ಮಾಡಿ, ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಕಾರ್ಯಾಚರಣೆಯಿಂದಾಗಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande