
ನಾಗ್ಪುರ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಡಾ.ಹೆಡಗೇವಾರ್ ಸ್ಮಾರಕ ಸಮಿತಿ ವತಿಯಿಂದ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಣ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್ ಪ್ರಮುಖ ನಾಯಕ ಚಂಪತ್ ರೈ, ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರ, ಧಾರ್ಮಿಕ ಗುರು ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ, ಮಂದಿರದ ಮುಖ್ಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.
ಇದೇ ವೇಳೆ ನಿರ್ಮಾಣ ಕಾರ್ಯದಲ್ಲಿ ಪ್ರಮುಖವಾಗಿ ಭಾಗವಹಿಸಿದ್ದ ಟಾಟಾ ಸನ್ಸ್ ಮತ್ತು ಲಾರ್ಸನ್ & ಟುಬ್ರೋ ಪ್ರತಿನಿಧಿಗಳನ್ನೂ ಗೌರವಿಸಲಾಯಿತು. ಮಂದಿರ ನಿರ್ಮಾಣಕ್ಕೆ ಸಮರ್ಪಿತ ಕುಟುಂಬಗಳನ್ನೂ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಅವರು ಭಾಗವಹಿಸಿ, ಮಂದಿರ ನಿರ್ಮಾಣಕ್ಕೆ ತಮ್ಮ ಶ್ರಮ ಹಾಗೂ ಸಮರ್ಪಣೆಯನ್ನು ನೀಡಿದ ಎಲ್ಲರನ್ನೂ ಅಭಿನಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa