ಬೆಂಗಳೂರು ರಸ್ತೆಗುಂಡಿ ವಿಚಾರ ; ಡಿಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳ ದುರಸ್ಥಿ ವೆಚ್ಚದ ವಿಚಾರವಾಗಿ, ಪ್ರತಿಪಕ್ಷ ನಾಯಕ ಆರ್.ಅಶೋಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ರಸ್ತೆಗು
Ashok


ಬೆಂಗಳೂರು, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳ ದುರಸ್ಥಿ ವೆಚ್ಚದ ವಿಚಾರವಾಗಿ, ಪ್ರತಿಪಕ್ಷ ನಾಯಕ ಆರ್.ಅಶೋಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ರಸ್ತೆಗುಂಡಿಗಳಿಗೆ ಡಾಂಬರು ಹಾಕುತ್ತಿದ್ದೀರೋ ಅಥವಾ 24 ಕ್ಯಾರೆಟ್ ಚಿನ್ನದ ಲೇಪನ ಮಾಡುತ್ತಿದ್ದೀರೋ?” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ರಸ್ತೆಗುಂಡಿ ಮುಚ್ಚಲು ಸುಮಾರು ₹1 ಲಕ್ಷ ವೆಚ್ಚ ಮಾಡಲಾಗುತ್ತಿದೆ ಎಂಬ ಆರೋಪ ಮಾಡಿರುವ ಅವರು, ಇದು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ “ವ್ಯವಸ್ಥಿತ ಲೂಟಿ” ಎಂದು ಟೀಕಿಸಿದ್ದಾರೆ. “ಕನ್ನಡಿಗರ ತೆರಿಗೆ ಹಣ ‘ಗುಂಡಿ’ ಪಾಲಾಗುತ್ತಿದೆ ಎಂಬುದಕ್ಕೆ ಅಂಕಿ-ಅಂಶಗಳೇ ಸಾಕ್ಷಿ,” ಎಂದು ಹೇಳಿದ್ದಾರೆ.

ನಗರದ ರಸ್ತೆ ಸ್ಥಿತಿಯನ್ನು “ನರಕದಂತಿದೆ” ಎಂದು ವಿವರಿಸಿದ ಅಶೋಕ್, “ಬಿಲ್ ಮಾತ್ರ ಸ್ವರ್ಗದಷ್ಟಿದೆ. ಬೆಂಗಳೂರಿನ ರಸ್ತೆಗಳು ವಾಹನ ಸವಾರರಿಗೆ ಮೃತ್ಯುಕೂಪಗಳಾಗಿವೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜನರು ಶೀಘ್ರದಲ್ಲೇ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande