
ಬೆಂಗಳೂರು, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದಿನ ಹವಾಮಾನದಲ್ಲಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆ ಇದೆ.
ವಿಶೇಷವಾಗಿ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಬಿಸಿಲಿನ ತಾಪಮಾನ ಮುಂದುವರಿಯುವ ಹಿನ್ನೆಲೆ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ. ಜೊತೆಗೆ ಮಳೆ ಹಾಗೂ ಸಿಡಿಲು ಸಂದರ್ಭಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa