ಕೇಂದ್ರದ ಜನಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು : ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ನಡೆಸುತ್ತಿರುವ ಜನಗಣತಿಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಬೇಕು ಎಂದು ನಗರ ಶಾಸಕ ನಾರಾ ಭರತರೆಡ್ಡಿ ಅವರು ತಿಳಿಸಿದ್ದಾರೆ. ನಗರದ 37ನೇ ವಾರ್ಡಿನ ದೇವಿನಗರದಲ್ಲಿ ಭೂಮಿ ಪೂಜೆ - `ಸಲಾಂ ಬಳ್ಳಾರಿ'' ಹಾಗೂ `ಮನೆ ಮನೆಗ
ಕೇಂದ್ರದ ಜನಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು : ಶಾಸಕ ನಾರಾ ಭರತರೆಡ್ಡಿ


ಕೇಂದ್ರದ ಜನಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು : ಶಾಸಕ ನಾರಾ ಭರತರೆಡ್ಡಿ


ಕೇಂದ್ರದ ಜನಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು : ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ನಡೆಸುತ್ತಿರುವ ಜನಗಣತಿಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಬೇಕು ಎಂದು ನಗರ ಶಾಸಕ ನಾರಾ ಭರತರೆಡ್ಡಿ ಅವರು ತಿಳಿಸಿದ್ದಾರೆ.

ನಗರದ 37ನೇ ವಾರ್ಡಿನ ದೇವಿನಗರದಲ್ಲಿ ಭೂಮಿ ಪೂಜೆ - `ಸಲಾಂ ಬಳ್ಳಾರಿ' ಹಾಗೂ `ಮನೆ ಮನೆಗೂ ಭರತ್' ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಸುದ್ದಿಗಾರ ಜೊತೆ ಮಾತನಾಡಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು - ಸಿಬ್ಬಂದಿಗಳು ಜನಗಣತಿಗಾಗಿ ಮನೆಗೆ ಬಂದಾಗ ಪ್ರತಿಯೊಬ್ಬರೂ ಸಹಕಾರ ನೀಡಿ ಜನಗಣತಿಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅನಿಲ ಪೂರೈಕೆಯಲ್ಲಿ ಅಕ್ರಮ ತಡೆಗಟ್ಟಲು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಂಡಿದ್ದರೆ. ಮುಂದಿನ ದಿನಗಳಲ್ಲಿ ಅನಿಲ ಪೂರೈಕೆಯಲ್ಲಿ ಅಕ್ರಮಗಳು ಕಂಡು ಬಂದರೆ ಅಧಿಕಾರಿಗಳ ಹಾಗೂ ತಮ್ಮ ವೈಯಕ್ತಿಕ ಗಮನಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 37 ಹಾಗೂ 38ನೇ ವಾರ್ಡುಗಳಲ್ಲಿ ರಸ್ತೆ, ಮಳೆ ನೀರು ಚರಂಡಿ, ಒಳ ಚರಂಡಿ ಹಾಗೂ ಪೇವರ್ಸ್ ಅಳವಡಿಕೆ ಕಾಮಗಾರಿಗಳ ಎರಡು ಪ್ರತ್ಯೇಕ ಕಾಮಗಾರಿಗಳಿಗೆ ತಲಾ 2 ಕೋಟಿ ರೂ.ಗಳಂತೆ ಒಟ್ಟು 4 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಕುಡಿಯುವ ನೀರಿನ ಸಮಸ್ಯೆ ಇಲ್ಲ: ಬಳ್ಳಾರಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ತುಂಗಭದ್ರಾ ಜಲಾಶಯದಿಂದ 400 ಕ್ಯೂಸೆಕ್ ನೀರನ್ನು ಕಾಲುವೆ ಮೂಲಕ ಕೆರೆಗೆ ತುಂಬಿಸಲು ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ ಎಂದರು.

ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ಎಸ್. ಮಂಜುನಾಥ, 38ನೇ ವಾರ್ಡಿನ ಸದಸ್ಯ ವಿ. ಕುಬೇರ, ಮಾಜಿ ಮೇಯರ್ ಎಂ. ರಾಜೇಶ್ವರಿ ಸುಬ್ಬರಾಯಿಡು, ಪಾಲಿಕೆಯ ಸದಸ್ಯರಾದ ಮಿಂಚು ಸೀನ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande