
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸಂಸದ ಗೋವಿಂದ ಕಾರಜೋಳ್ ಅವರು ಬಾಗಲಕೋಟೆಯ ವಕೀಲರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಸಮಾಜದ ದಾರಿದೀಪಗಳಾಗಿರುವ ವಕೀಲರು ಕ್ಷೇತ್ರಕ್ಕೆ ಬೇಕಾದ ದಕ್ಷ ನಾಯಕತ್ವದ ಬಗ್ಗೆ ಸ್ಪಷ್ಟ ಅರಿವು ಹೊಂದಿದ್ದಾರೆ ಎಂದು ಹೇಳಿದರು.
ಬಾಗಲಕೋಟೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಅವರಿಗೆ ಬೆಂಬಲ ನೀಡಿ ಬಹುಮತದಿಂದ ಗೆಲುವು ಸಾಧಿಸುವಂತೆ ಮನವಿ ಮಾಡಿದರು.
ಕಾನೂನು ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಸುಭದ್ರ ಬಾಗಲಕೋಟೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande